ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಗ್ರಹಿಕೆ ಆಗಿದೆ- ಟೆಂಗಿನಕಾಯಿ

Spread the love

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು , ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಮಾಹಿತಿ ಇದೆ ಯಾವುದೇ ರೀತಿಯ ಅನ್ಯಾಯ ಆಗಿಲ್ಲ ಲಿಂಗಾಯತ ನಾಯಕರಿಗೆ ಒಂದು ವೇಳೆ ಅಗತ್ಯ ಬಿದ್ಧರೆ
ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಜೊತೆಗೆ ಮಾತನಾಡುವೆ ಎಂದರು.
ಇನ್ನು ಕಾಂಗ್ರೆಸ್ ನಾಯಕರಿಗೆ ಆಧಾಯ ತೆರಿಗೆ ಅಧಿಕಾರಿಗಳಿಂದ ನೋಟೀಸ್ ಜಾರಿ ಮಾಡಿದ ಕುರಿತು ಸಹ ಮಾತನಾಡಿದ ಅವರು ಆದಾಯ ತೆರಿಗೆ ಇಲಾಖೆ ಸ್ವತಂತ್ರ ಆಗಿದ್ದು ಯಾವುದೇ ರೀತಿಯ ಭಾರತೀಯ ಜನತಾ ಪಕ್ಷದ ನಾಯಕರ ಹಸ್ತಕ್ಷೇಪ ಇಲ್ಲ. ಇದು ದಾವಣಗೆರೆ ಸಂಸದ ಸಿದ್ದೇಶ್ವರ ಮೇಲೆಯೀ ಸಹ ಐಟಿ ದಾಳಿ ಆಯಿತು ಆವಾಗ ಅದರಲ್ಲಿ ಯಾರ ಕೈವಾಡ ಇದೆ ಎಂದರು.


Spread the love

Leave a Reply

error: Content is protected !!