ಧಾರವಾಡ; ಇಂದು ಬೆಳಿಗ್ಗೆ ಆರು ಗಂಟೆಯಿಂದ ರಾಜ್ಯ ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಆರಂಭವಾಗಿರುವ ಲಾಕಡೌನ್ ನಿಯಮ ಉಲ್ಲಂಘಿಸಿ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನಗತ್ಯವಾಗಿ ರಸ್ತೆಗಿಳಿದ ಬೈಕ್ ಗಳನ್ನು ಜಪ್ತಿ ಮಾಡಿ, ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಪ್ರದೇಶದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಿಂದ ಆರಂಭವಾದ ನಿಯಮ ಉಲ್ಲಂಘಿಸಿ ಸಂಚರಿಸುವವರ ವಿರುದ್ಧದ ಕಾರ್ಯಾಚರಣೆಯಲ್ಲಿ ಸುಮಾರು 430 ಕ್ಕೂ ಹೆಚ್ಚು ಬೈಕ್ ಗಳನ್ನು ಜಪ್ತಿ ಮಾಡಿ, ಪ್ರಕರಣ ದಾಖಲಿಸಲಾಗಿದೆ.
ಲಾಕಡೌನ್ ಮುಕ್ತಾಯವಾದ ನಂತರ ಪರಿಶೀಲಿಸಿ, ಜಪ್ತಿ ಮಾಡಿರುವ ವಾಹನಗಳನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರತಿದಿನ ಪೊಲೀಸ್ ಸಿಬ್ಬಂದಿ ರಸ್ತೆ, ಗ್ರಾಮಗಳಲ್ಲಿ ತಪಾಸಣೆ ಮಾಡಲಿದ್ದು, ಕಾರಣವಿಲ್ಲದೆ, ಅನಗತ್ಯವಾಗಿ, ನಿಯಮ ಉಲ್ಲಂಘಿಸಿ ಸಂಚರಿಸಿದರೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿದರೆ ಅಂತವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು ಪ್ರಕರಣ ದಾಖಲಿಸಲಾಗಿವುದು. ಸಾರ್ವಜನಿಕರು ಕೋವಿಡ್ ನಿಯಮಗಳ ಪಾಲನೆಗೆ ಸಹಕಾರ ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://karnatakajunction.com/wp-content/uploads/2022/09/images-6.jpeg)