ಬೆಂಗಳೂರು; ಹೈದರಾಬಾದ್ನಲ್ಲಿರುವ ಸರ್ದಾರ್ ವಲ್ಲಭಬಾಯಿ ನ್ಯಾಷನಲ್ ಪೊಲೀಸ್ ಅಕಾಡೆಮಿಗೆ ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಸರನ್ನಿಡಲಾಗಿದೆ.
ಹೈದರಾಬಾದ್ನ ರಾಷ್ಟೀಯ ಪೊಲೀಸ್ ಅಕಾಡೆಮಿಗೆ ದಿ.ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಸರು!ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಅವರ ಕಾರ್ಯದಕ್ಷತೆ, ಪ್ರಾಮಾಣಿಕತೆಗೆ ಸಮರ್ಪಣಾ ಮನೋಭಾವ ಕಂಡು ಅಕಾಡೆಮಿಯ ಲೆಕ್ಚರಲ್ ಹಾಲ್ ಮಧುಕರ್ ಶೆಟ್ಟಿ ಹೆಸರಿಟ್ಟಿದೆ. ಈ ಮೂಲಕ ಪೊಲೀಸ್ ತರಬೇತಿ ಪಡೆಯುವ ಐಪಿಎಸ್ ಅಧಿಕಾರಿಗಳಿಗೆ ಅವರು ಸ್ಫೂರ್ತಿಯಾಗಲಿದ್ದಾರೆ.1999 ರ ಬ್ಯಾಚ್ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಕೆಲಸ ಮಾಡಿದ್ದರು. ಉಡುಪಿ ಜಿಲ್ಲೆಯವರಾಗಿದ್ದ ಶೆಟ್ಟಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.ಮಧುಕರ್ ಶೆಟ್ಟಿ ಅವರು ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲೂ ಪ್ರಾಮಾಣಿಕ ಅಧಿಕಾರಿಯಾಗಿ ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದರು. ಕೆಲ ವರ್ಷಗಳ ಬಳಿಕ ಅವರನ್ನು ಹೈದರಾಬಾದ್ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿತ್ತು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …