ಹುಬ್ಬಳ್ಳಿ- ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದಂತೆ ನೇರವಾಗಿ ಕೃಷಿ ಕಾಯಕದಲ್ಲಿ ತೊಡಗಿದ್ದಾರೆ. ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತಲ್ಲಿನರಾಗಿದ್ದಾರೆ.
ಸೋಂಕಿಗೆ ಬಳಲಯತ್ತಿದ್ದ ಅವರು, ಕಿಮ್ಸ್ ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ತಮ್ಮ ಇಳಿವಯಸ್ಸಿನಲ್ಲೂ ತಮ್ಮ ನೆಚ್ಚಿನ ಕೃಷಿ ಚಟಿವಟಿಕೆಯಲ್ಲಿ ತೊಡಗುವ ಮೂಲಕ ಕೊರೊನಾ ಸೋಂಕಿನಿಂದ ಆತ್ಮಬಲ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಖಿನ್ನತೆಗೆ ಒಳಗಾಗುವ ಯುವಕರಿಗೆ ಮಾದರಿಯಾಗಿದ್ದಾರೆ.
ಸದ್ಯ ತಮ್ಮ ನೆಚ್ಚಿನ ನಿಸರ್ಗ ತೋಟದ ಮನೆಯಲ್ಲಿರುವ ಅವರು, ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ ಸ್ವತಃ ಟ್ರ್ಯಾಕ್ಟರ್ ಮೂಲಕ ಉಳಿಮೆ ಮಾಡುತ್ತ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದಾರೆ.
