ಕೋವಿಡ್​ ಪರೀಕ್ಷೆ ಕಡಿಮೆ ಮಾಡಲು ಚಿಂತನೆ- ಸರ್ಕಾರದಿಂದ ಜನರ ಕೊಲೆ ಡಿಕೆಶಿ ಆರೋಪ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಕಡಿಮೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದು ಸರಿಯಲ್ಲ. ಇದು ಸರ್ಕಾರವೇ ಜನರನ್ನು ಹತ್ಯೆ ಮಾಡುವ ನಿರ್ಧಾರ. ಜನರ ಸಾವಿಗೆ ಸರ್ಕಾರವೇ ನೇರ ಕಾರಣವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಐಸಿಎಂಆರ್ ವರದಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸಬೇಕು ಎಂದು ಹೇಳಿದೆ. ಸರ್ಕಾರ ಶೇ. 50 ರಷ್ಟು ಪರೀಕ್ಷೆ ಕಡಿಮೆ ಮಾಡಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಪರೀಕ್ಷೆ ಮಾಡಿದಷ್ಟು ಜನ ಜಾಗೃತರಾಗಿರುತ್ತಾರೆ. ಆದರೆ, ಸೋಂಕಿನ ಪ್ರಕರಣ ಹೆಚ್ಚಾಗುತ್ತದೆ ಎಂದು ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ. ಜನರನ್ನು ಸರ್ಕಾರವೇ ಹತ್ಯೆ ಮಾಡಿದಂತೆ ಆಗುತ್ತದೆ. ಹೀಗಾಗಿ ಸರ್ಕಾರ ಹೆಚ್ಚಿನ ಪರೀಕ್ಷೆ ನಡೆಸಬೇಕು. ಇದರಿಂದ ಸೋಂಕಿತರು ಆರಂಭದಲ್ಲೇ ಗುಣಪಡಿಸಿಕೊಳ್ಳಲು ನೆರವಾಗುತ್ತದೆ. ಡಿಸಿಎಂ ಅಶ್ವತ್ಥ ನಾರಾಯಣ್ ಅವರು ಜವಾಬ್ದಾರಿ ವಹಿಸಿಕೊಂಡ ನಂತರ ಈ ರೀತಿ ಆದೇಶ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.ಸರ್ಕಾರ ಜೀವ ಉಳಿಸಲು ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ನಾವು ಸಹಕಾರ ನೀಡುತ್ತೇವೆ. ಆದರೆ, ಮಾಡಿದ ತಪ್ಪನ್ನು ಒಪ್ಪಿಕೊಳ್ಳದೇ ನಾವು ಮಾಡಿದ್ದೇ ಸರಿ ಎನ್ನುವುದಾದರೆ ನಾವು ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರದ ಕಾರ್ಯವೈಖರಿ ಬಗ್ಗೆ ನ್ಯಾಯಾಧೀಶರು ಏನೆಲ್ಲಾ ಹೇಳುತ್ತಿದ್ದಾರೆ, ಮಾಧ್ಯಮಗಳು ಏನು ವರದಿ ಮಾಡುತ್ತಿವೆ, ಜನ ಸಾಮಾನ್ಯರು ಏನು ಮಾತನಾಡುತ್ತಿದ್ದಾರೆ ಎಂಬುದನ್ನು ಸರ್ಕಾರ ಗಮನಿಸಬೇಕು‌. ಮಂತ್ರಿಗಳು ಈಗ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕೆಲಸ ಮಾಡಿ ಎಂದು ನಾನು ಕಳೆದ ತಿಂಗಳ 18 ರಂದೇ ಹೇಳಿದ್ದೆ. ವಿರೋಧ ಪಕ್ಷದವರು ಹೇಳಿದ್ದನ್ನು ಮಾಡಲು ಈ ಸರ್ಕಾರ ಬೇಕಾ? ಇವರ ಕೈಯಲ್ಲಿ ಇದನ್ನು ನಿಭಾಯಿಸಲು ಸಾಧ್ಯವಿಲ್ಲ. ಇವರು ಮನೆಗೆ ಹೋಗಿ, ರಾಜ್ಯಪಾಲರ ಆಡಳಿತ ಬರುವುದೇ ಉತ್ತಮ ಎಂದರು.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply