ಬೆಂಗಳೂರು : ಮಹಾಮಾರಿ ಕೋವೀಡ್ ಜೊತೆಗೆ ಕಾಡುತ್ತಿರುವ
ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ, ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸೋಮವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ.ಕೋವಿಡ್ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ, ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ.ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ.ಮಾರುಕಟ್ಟೆಯಲ್ಲಿ ಈ ಔಷಧಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಈಗಾಗಲೇ 5 ರಿಂದ 7 ಸಾವಿರ ರೂ.ಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ.ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್ಲ.ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ, ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ?, ಏಕೆ ಹರಡುತ್ತಿದೆ?, ಯಾವಾಗ ಹರಡುತ್ತಿದೆ?, ರೋಗ ಲಕ್ಷಣಗಳೇನು?, ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು?, ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು?, ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿಯನ್ನು ಹೊರಡಿಸಬೇಕು.ಅವೈಜ್ಞಾನಿಕವಾಗಿ ನಡೆದುಕೊಳ್ಳಬೇಡಿಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು ಎಂದರು.
Check Also
ವಿದ್ಯಾಮಂತ್ರಿಗೆ ಕನ್ನಡ ಬರಲ್ಲ” ಎಂದಿರುವ ವಿದ್ಯಾರ್ಥಿ ಮೇಲೆ ಇಂಗ್ಲೀಷ್ ನಲ್ಲೇ ಕ್ರಮಕ್ಕೆ ಸೂಚನೆ ಅಕ್ಷಮ್ಯ
Spread the loveಹುಬ್ಬಳ್ಳಿ: ‘ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು …