ಬೆಂಗಳೂರು; ಗ್ರಾಮೀಣ ಪ್ರದೇಶಗಳಲ್ಲಿ ಕರೋನಾ ಸೋಂಕೀತ ಪ್ರಕರಣ ಹೆಚ್ಳಳವಾಗುತಿದ್ದು ಆರೋಗ್ಯ ಸಚಿವರು ಹೊಸ ನಿಯಮಗಳನ್ನು ಸೋಮವಾರದಿಂದ ಜಾರಿಗೆ ತಂದಿದ್ದಾರೆ. ಸೋಂಕಿತರು
ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತಿಲ್ಲ, .ಕಡ್ಡಾಯವಾಗಿ ಪ್ರಾಥಮಿಕ ಚಿಕಿತ್ಸಾ ವಲಯದ ಕೇರ್ ಸೆಂಟರ್ ಗೆ ದಾಖಲು ಆಗಬೇಕು.ಕೇರ್ ಸೆಂಟರ್ ನಲ್ಲಿ ಅಗತ್ಯ ಚಿಕಿತ್ಸೆ ಆರೋಗ್ಯ ಇಲಾಖೆ ನೀಡುತ್ತದೆ.ಸೋಂಕು ಹೆಚ್ಚಳ ಆಗಬಾರದು ಅಂದರೆ ಈ ಕ್ರಮ ಮುಖ್ಯಹೀಗಾಗಿ ಈ ನಿಯಮ ಜಾರಿಗೆ ತರಲಾಗಿದೆ ಎಂದು ನುಡಿದರು. ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಗ್ರಾಮೀಣ ಪ್ರದೇಶಗಳಿಗೆ ಹಬ್ಬುತ್ತಿದ್ದು ಅಲ್ಲಿ ಸೋಂಕಿ ತರನ್ನು ಯಾವ ರೀತಿ ಕ್ವಾರಂಟೈನ್ ಗೆ ಒಳಪಡಿ ಸಬೇಕು, ಅವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಹಳ್ಳಿ ಜನರಿಗೆ ಯಾವ ರೀತಿ ಅರಿವು ಮೂಡಿಸಬೇಕೆಂಬ ಬಗ್ಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಆದಷ್ಟು ಶೀಘ್ರದಲ್ಲಿ ಲಸಿಕೆಯನ್ನು ರಾಜ್ಯದ ಜನತೆಗೆ ನೀಡುವುದು ಸರ್ಕಾರದ ಮುಂದಿರುವ ಮೊದಲ ಸವಾಲಾದರೆ, ಕೊರೋನಾ ಎರಡನೇ ಅಲೆಯನ್ನು ಗ್ರಾಮೀಣ ಪ್ರದೇಶದಲ್ಲಿಯೂ ನಿಯಂತ್ರಣಕ್ಕೆ ತರುವುದು ಎರಡನೇ ಮುಖ್ಯ ಸವಾಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಮನೆಗಳಲ್ಲಿಯೇ ಐಸೊಲೇಷನ್ ಆದವರಿಂದ ಸೋಂಕು ಹೆಚ್ಚು ಹರಡುತ್ತಿದೆ, ಐಸೊಲೇಷನ್ ನಿಯಮಗಳನ್ನು ಸರಿಯಾಗಿ ಪಾಲಿಸದೆ, ಐಸೊಲೇಷನ್ ಗಳಿಗೆ ವ್ಯವಸ್ಥೆಯಿಲ್ಲದೆ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಎಂಬ ಖಚಿತ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸಾ ವಲಯಗಳನ್ನು ಹೋಬಳಿ,ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರನ್ನು ಇರಿಸಬೇಕು ಎಂದು ಸರ್ಕಾರ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ, ಜಿಲ್ಲಾಧಿಕಾರಿಗಳು ಇದನ್ನು ಸರಿಯಾಗಿ ನೋಡಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಹೇಳಿದರು.
ಕೊರೋನಾ ರೂಪಾಂತರಿ ಹೊಸತು ಈಗ ಎದ್ದಿರುವ ಎರಡನೇ ಅಲೆಯಲ್ಲಿ ಬಂದಿರುವ ಕೊರೋನಾ ರೂಪಾಂತರಿ ಸೋಂಕು ಹೊಸದು, ಬೇರೆ ದೇಶಗಳಲ್ಲಿ ಇಲ್ಲ, ನಮ್ಮ ದೇಶದಲ್ಲಿ ಮಾತ್ರ ಇದ್ದು, ವಿಜ್ಞಾನಿಗಳು ಇದರ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ, ಇದು ಬರುತ್ತದೆ ಎಂಬ ಬಗ್ಗೆ ನಮಗೆ ಒಂಚೂರು ಮಾಹಿತಿ ಇರಲಿಲ್ಲ ಎಂದರು.
ಸಾಂಕ್ರಾಮಿಕ ರೋಗ ವಿಚಾರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ಹೇಳಿದರೂ ವಿರೋಧ ಪಕ್ಷ ನಾಯಕರು ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ನಿಮಗೆ ಬದ್ಧತೆಯಿದ್ದರೆ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಿ, ರಾಜಕಾರಣ ಮಾಡಬೇಡಿ ಎಂದು ಹೇಳಿದರು.
ಲಾಕ್ ಡೌನ್ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಚಿವ ಸುಧಾಕರ್ ಇಂದು ಸಾಯಂಕಾಲ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದಾರೆ, ಅದರಲ್ಲಿ ನಾವೆಲ್ಲರೂ ಕೋವಿಡ್-19 ವಿಚಾರವಾಗಿ ಕೂಲಂಕಷವಾಗಿ ಚರ್ಚೆ ಮಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದರು.
Check Also
ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ
Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …