ಬೆಂಗಳೂರು: ನಗರದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಬುಧವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಹಲವು ಕುತೂಹಲ ಕೆರಳಿಸಿದೆ.
ಸುದ್ದಿಗೋಷ್ಠಿಗೂ ಮುನ್ನ ಸಿಎಂ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ನಾಳೆ ಸಿಎಂ ಯಡಿಯೂರಪ್ಪ ಲಾಕ್‌ಡೌನ್ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಮೇ 24 ರಿಂದ 31ರವರೆಗೆ ಲಾಕ್‌ಡೌನ್ ವಿಸ್ತರಿಸಿ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಪ್ರತಿಪಕ್ಷ, ಸಾರ್ವಜನಿಕರಿಂದ ಸಾಕಷ್ಟು ಒತ್ತಡ ಬರುತ್ತಿದೆ. ಹೀಗಾಗಿ ಈ ಬಗ್ಗೆಯೂ ಕಾರ್ಮಿಕ ಹಾಗೂ ಬಡ ವರ್ಗದವರಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ.ಹಿರಿಯ ಸಚಿವರ ಜೊತೆ ಸಭೆ ನಡೆಸಿ, ಲಾಕ್‌ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಅಂತಿಮವಾಗಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.