ಫ್ರೂಟ್ ಇರ್ಫಾನ್ ಹುಬ್ಬಳ್ಳಿಯ 4ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು
gcsteam
September 23, 2022
ಜಿಲ್ಲೆ
70 Views
- ಹುಬ್ಬಳ್ಳಿ: ಫ್ರುಟ್ ಇರ್ಫಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಹ್ಯಾರಿಸ್ ಪಠಾಣ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.ಕಳೆದ ವರ್ಷ ಆಗಸ್ಟ್ 6ರಂದು ಹಳೇ ಹುಬ್ಬಳ್ಳಿಯ ಹೊಟೇಲ್ ಮುಂಭಾಗದಲ್ಲಿ ಫ್ರುಟ್ ಇರ್ಫಾನ್ ಅಲಿಯಾಸ್ ಇರ್ಫಾನ್ ಹಂಚಿನಾಳನನ್ನು ಶೂಟ್ ಮಾಡಿ ಕೊಲೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಧಾರವಾಡದ ಹ್ಯಾರಿಸ್ ಪಠಾಣ್ ತಲೆಮರೆಸಿಕೊಂಡಿದ್ದ. ಇಂದು ಹುಬ್ಬಳ್ಳಿಯ 4ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.ಈ ಹಿಂದೆ ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಹ್ಯಾರಿಸ್ ಜಾಮೀನು ಸಿಗದ ಹಿನ್ನೆಲೆ ಶರಣಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುವ ಸಾಧ್ಯತೆಯಿದೆ.