ಕೋವೀಡ್-19 ಸೋಂಕು ತಡೆ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ
Karnataka Junction
September 23, 2022
ಮುಖ್ಯಾಂಶ
160 Views
- ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಎಗ್ಗಿಲ್ಲದೇ ಹರಡುತ್ತಿರು ವುದರಿಂದ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಅರವಿಂದ ಬೆಲ್ಲದ, ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣ ಕುರಿತು ವಿವಿಧ ಸಂಸ್ಥೆ ಗಳ ಜೊತೆ ಚರ್ಚೆ ನಡೆಸಿದರು.ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ನಾಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಧಾರವಾಡದಲ್ಲಿ ಯಾವ ರೀತಿ ಸಂಪೂರ್ಣ ಲಾಕ್ಡೌನ್, ಎಷ್ಟು ದಿನ. ಏನಿರುತ್ತೆ, ಏನಿರುವುದಿಲ್ಲ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿದ್ದಾರೆ.
Posts Views: 72