ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್ ಕಾಳಜಿ ಕೇಂದ್ರಗಳ ಮೂಲಕ ಕೋವೀಡ್ ಮುಕ್ತ ಗ್ರಾಮ- ಡಿಸಿ ನೀತೀಶ ಪಾಟೀಲ ಪಣ

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೋಬಳಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಕಾಳಜಿ ಕೇಂದ್ರಗಳನ್ನು ಪ್ರಾರಂಭ ಮಾಡಿ ಕೋವಿಡ್ ಮುಕ್ತ ಹಳ್ಳಿ ಮಾಡುವಲ್ಲಿ ಪ್ರಯತ್ನಿಸ ಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೊರೋನಾ ಸೋಂಕು ಇತ್ತಿಚೆಗೆ ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಲಕ್ಷಣಯುಳ್ಳವರು ಐಶ್ಯುಲೇಶನ್ ಆಗಲು ಪಟ್ಟಣದ ಆಸ್ಪತ್ರೆಗೆ ಬರಲು ಹಿಂದೆಟ್ಟು ಹಾಕುತ್ತಿದ್ದಾರೆ. ಈ ದಿಸೆಯಲ್ಲಿ ಜಿಲ್ಲಾಡಳಿತದಿಂದ ಹಳ್ಳಿಗಳಲ್ಲಿಯೇ ಕೋರೋನಾ ಕಾಳಜಿ ಕೇಂದ್ರ ತೆರೆದು ಅಲ್ಲಿ ಆರೈಕೆ ಮಾಡುವ ಉದ್ದೇಶ ಹೊಂದಿದ್ದೇವೆ. ಇದಕ್ಕಾಗಿ ಈಗಾಗಲೇ ವಿವಿಧೆಡೆ 20 ಕಾಳಜಿ ಕೇಂದ್ರ ಪ್ರಾರಂಭ ಮಾಡಲಾಗಿದ್ದು, ಹಳ್ಳಿಗಳಲ್ಲಿ ಶೇ.60 ರಷ್ಟು ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ ಎಂದರು.
ಇನ್ನೂ ಹಳ್ಳಿಗರಲ್ಲಿಯೇ ಕೊರೋನಾ ಅರಿವು ಬರುತ್ತಿದ್ದು, ಸ್ವಯಂ ಪ್ರೇರಿತವಾಗಿ ಆಯಾ ಗ್ರಾಮ ಪಂಚಾಯತಗಳು ಲಾಕ್ ಡೌನ್ ಮಾಡಿಕೊಳ್ಳುತ್ತಿವೆ. ಈ ಲಾಕ್ ಡೌನ್ ಮುಗಿಯುವ ವೇಳೆಗೆ ಜಿಲ್ಲೆಯಲ್ಲಿ ಕೊರೋನಾ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಲಾಗುವುದು ಎಂದರು.
*ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ ಶಿಲ್ಡ್:* ಕೊರೋನಾ ಸಂದರ್ಭದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಕೋರೋನಾ ಲಸಿಕೆ ನೀಡಲಾಗುತ್ತಿದ್ದು, ಅದರಂತೆ ಇಂದು ಸಾವಿರ ಬೀದಿ ಬದಿಯ ವ್ಯಾಪಾರಸ್ಥರಿಗೆ ಕೋವಿಡ್ ಶಿಲ್ಡ್ ನೀಡಲಾಗುತ್ತಿದೆ ಎಂದರು.Χ


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply