ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮತ್ತೇ ಮಾರಕಾಸ್ತ್ರಗಳು ಸದ್ದು ಮಾಡುತ್ತಿವೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿ ನಡೆದಿದೆ.
ಹೌದು.. ಕ್ಷುಲ್ಲಕ ಕಾರಣಕ್ಕೆ ಜಿಲಾನಿ ಹಾಗೂ ಜಾವೀದ್ ಎಂಬುವವರಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೂ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕುಳಿತ ವ್ಯಕ್ತಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಚಾಕು ಇರಿತಕ್ಕೆ ಕಾರಣ ತಿಳಿದು ಬಂದಿಲ್ಲ. ಎರಡು ತಿಂಗಳ ಹಿಂದೆಯಷ್ಟೇ ಹಳೆ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದಿತ್ತು. ಅಲ್ಲದೇ ಮೊನ್ನೆಯಷ್ಟೇ ಗುಟ್ಕಾ ವಿಚಾರಕ್ಕೂ ದೊಡ್ಡ ಪ್ರಕರಣವೇ ನಡೆದು ಹೋಗಿತ್ತು. ಈಗ ಮತ್ತೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
