ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡದ ಕಾರಣ, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದು, ನೂರಾರು ಶೆಟ್ಟರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಹೌದು,,, ನಗರದ ಹೊಸೂರಿನಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ, 12 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ದೇವೇಂದ್ರ ಹರಿವಾಣ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಈ ಚುನಾವಣೆ ಸೆಮಿಫೈನಲ್ ಇದ್ದ ಹಾಗೆ, ಮುಂದೆ 24 ರಲ್ಲಿ ಫೈನಲ್ ಪಂದ್ಯ ಇದೆ ಎಂದು ಪರೋಕ್ಷವಾಗಿ ಕೆಲ ನಾಯಕರಿಗೆ ಎಚ್ಚರಿಕೆ ನೀಡಿದರು.
ಈ ಪ್ರಚಾರ ಸಭೆಯಲ್ಲಿ ಉಭಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ , ಅನಿಲಕುಮಾರ್ ಪಾಟೀಲ , ಕಾಂಗ್ರೆಸ್ ಮುಖಂಡರಾದ ಸತೀಶ ಮಹರವಾಡೆ , ಮಂಜುನಾಥ ಕುನ್ನೂರ , ಸದಾನಂದ ಡಂಗನವರ ಎಂ.ಎಂ.ಗೌಡರ , ಪ್ರಭು ಹಿರೇಕೆರೂರ , ಅಲ್ತಾಫ್ ಕಿತ್ತೂರ , ಬಸವರಾಜ್ ಗುರಿಕಾರ , ನಾಗೇಶ ಕಲಬುರ್ಗಿ , ಮಲ್ಲಿಕಾರ್ಜುನ ಸಾಹುಕಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.
Check Also
ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ
Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …