Breaking News

ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯನಿರತ ಹೆಸ್ಕಾಂ ಎಇಇ ಕೃಷ್ಣಮೂರ್ತಿ ಬಿ.ಆರ್. ಹೃದಯಾಘಾತದಿಂದ ನಿಧನ*

Spread the love

ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯನಿರತ ಹೆಸ್ಕಾಂ ಎಇಇ ಕೃಷ್ಣಮೂರ್ತಿ ಬಿ.ಆರ್. ಹೃದಯಾಘಾತದಿಂದ ನಿಧನ*

*ಧಾರವಾಡ ಏ.20:* 11-ಧಾರವಾಡ ಲೋಕಸಭಾ ಮತಕ್ಷೇತ್ರದ 74 – ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಹುಬ್ಬಳ್ಳಿಯ ಹೆಸ್ಕಾಂ ( ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ) ಕೇಂದ್ರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಕೃಷ್ಣಮೂರ್ತಿ ಬಿ.ಆರ್ .(52), ಅವರು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೂಲತಃ ದಾವಣಗೆರೆಯವರಾದ ಕೃಷ್ಣಮೂರ್ತಿ ಅವರು ಹಲವು ವರ್ಷಗಳಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಸರಕಾರಿ ಕಿತ್ತೂರು ಸರಕಾರಿ ಆಸ್ಪತ್ರೆಯ ದಂತವೈದ್ಯೆ ಡಾ.ನಾಗರತ್ನಾ ಮತ್ತು ಮಗ ಸ್ವರೂಪ ಅವರನ್ನು ಅಗಲಿದ್ದಾರೆ.

ಎಇಇ ಕೃಷ್ಣಮೂರ್ತಿ ಅವರ ನಿಧನಕ್ಕೆ ಚುನಾವಣಾಧಿಕಾರಿ ದಿವ್ಯ ಪ್ರಭು ಹಾಗೂ ಹು-ಧಾ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಿಯಾಂಗ ಎಂ., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ ರೋಷನ್ , ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಅವರು ಸಂತಾಪ ಸೂಚಿಸಿದ್ದಾರೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!