Breaking News

ನೇಹಾ ಕೊಲೆ ಕೇಸ್: ನೇಹಾ ನಿರಂಜನ ಹಿರೇಮಠ ಮನೆಗೆ ಜೆಪಿ ನಡ್ಡಾ ಭೇಟಿ

Spread the love

ನೇಹಾ ಕೊಲೆ ಕೇಸ್: ನೇಹಾ ನಿರಂಜನ ಹಿರೇಮಠ ಮನೆಗೆ ಜೆಪಿ ನಡ್ಡಾ ಭೇಟಿ

ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ದಿನ ಕಳೆದಂತೆ ಸಾಕಷ್ಟು ತಿರುವುಗಳನ್ನ ಪಡೆದುಕೊಳ್ಳುತ್ತಿದ್ದು ರಾಜಕೀಯಗೊಳಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಮಧ್ಯಾಹ್ನ ೩.೩೦ಕ್ಕೆ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ.
ನೇಹಾ ಹಿರೇಮಠ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಫಯಾಜ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಸಂಬಂಧ ರಾಜ್ಯಾದ್ಯಾಂತ ಪ್ರತಿಭಟನೆ, ಆಕ್ರೊಶ ಭುಗಿಲೆದ್ದಿದೆ. ನೇಹಾ ಹತ್ಯೆಯ ಬಳಿಕ ಪ್ರಕರಣ ಖಂಡಿಸಿ ಮಠಾಧೀಶರು, ರಾಜಕಾರಣಿಗಳು ಮತ್ತು ನಾಗರೀಕರು ನೇಹಾ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳುತ್ತಿದ್ದಾರೆ. ಆರೋಪಿಯನ್ನು ಕೊಲ್ಲಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ.
ಮಧ್ಯಾಹ್ನ 2:25ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ನಡ್ಡಾ
ನೇರವಾಗಿ ನೇಹಾ ನಿರಂಜನ ಹಿರೇಮಠ ಮನೆಗೆ ತೆರಳಿಲಿರುವ೩
.೩೦ ಕ್ಕೆ ನೇಹಾ ನಿರಂಜನ ಹಿರೇಮಠ ಮನೆಗೆ ಭೇಟಿ ಸಾಂತ್ವನ ಹೇಳುವರು
ಏಪ್ರಿಲ್ 18 ರಂದು ನೇಹಾಳ ಕೊಲೆ ಆಗಿತ್ತು.‌ನಂತರ ಸಾಕಷ್ಟು ಜನಪ್ರತಿನಿಧಿಗಳು ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ಕೊಡತಾ ಇದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಅನೇಕ ನಾಯಕರು ಭಾಗವಹಿಸುವರು


Spread the love

About Karnataka Junction

    Check Also

    ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

    Spread the loveಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ ಹುಬ್ಬಳ್ಳಿ;ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ …

    Leave a Reply

    error: Content is protected !!