Breaking News

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣೆ ವೇಳೆ ಬಾಯಿಬಿಟ್ಟ ಫಯಾಜ್

Spread the love

ನೇಹಾ ನನ್ನ ಜೊತೆಗೆ ಮಾತಬಿಟ್ಟಿದ್ದಳು: ಇದಕ್ಕೆ ಚಾಕು ಹಾಕಬೇಕಾಯಿತು ಆರೋಪಿಯ ಸ್ಪೋಟಕ ಮಾಹಿತಿ

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣೆ ವೇಳೆ ಬಾಯಿಬಿಟ್ಟ ಫಯಾಜ್

ಹುಬ್ಬಳ್ಳಿ; ಏಪ್ರಿಲ್ 18 ರಂದು
ಮಧ್ಯಾಹ್ನ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿದೆ. ಕೊಲೆ ಮಾಡಿದ ಆರೋಪಿ ಫಯಾಜ್​ನನ್ನು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿ ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಬಿಟ್ಟಿದ್ದಾನೆ.
“ಅವಳು (ನೇಹಾ) ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು ಫಯಾಜ್​ ಕಾರಾಗೃಹ ಸಿಬ್ಬಂದಿ ಎದುರು ಹೇಳಿದ್ದಾನೆ. ಅಲ್ಲದೆ ಅವತ್ತು ಏನೆಲ್ಲ ಘಟನೆ ನಡೆಯಿತು ಎಂಬುವುದನ್ನು ವಿವರಿಸಿದ್ದಾನೆ.
ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು”.
“ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು (ಫಯಾಜ್​) ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ನಾನು ಚಾಕು ಹಾಕಿದ್ದೇನೆ” ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.
ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿನೇಹಾಳ ಕುರಿತು ನೇಹಾ ಮನೆಯ ಮುಂಭಾಗದಲ್ಲಿರುವ ಮುಸ್ಲಿಂ ಕುಟುಂಬ ಮಾತನಾಡಿ, ಹಿಂದೂ ಮುಸ್ಲಿಂ ಬೇಧ ಬಾವ ಇಲ್ಲದೆ ನಾವಿದ್ದೇವೆ. ನೇಹಾ ತಾಯಿ ನಮ್ಮ ಜೊತೆ ವಾಕಿಂಗ್ ಬರುತ್ತಾ ಇದ್ದರು. ನೇಹಾ ನಮ್ಮ ಜೊತೆ ಬಹಳ ಚೆನ್ನಾಗಿ‌ ಮಾತಾಡತಿದ್ದರು. ಅವರ ಮನೆಯಲ್ಲಿ ಹಬ್ಬ ಇದ್ದರೆ ನಾವು ಹೋಗತಿದ್ವಿ. ನಮ್ಮ ಮನೆಯಲ್ಲಿ ಹಬ್ಬ ಇದ್ದರೆ ಅವರು ಬರುತ್ತಿದ್ದರು. ಎಲ್ಲರೊಂದಿಗೆ ನೇಹಾ ಚೆನ್ನಾಗಿದ್ದಳು ಎಂದು ಹೇಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!