ಜಗದೀಶ ಶೆಟ್ಟರ್ ಪಕ್ಷಕ್ಕೆ ಮರಳಿದ ಮೇಲೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.ಪ್ರದೀಪ್ ಶೆಟ್ಟರ್ ಆಕ್ರೋಶ

Spread the love

ಜಗದೀಶ ಶೆಟ್ಟರ್ ಪಕ್ಷಕ್ಕೆ ಮರಳಿದ ಮೇಲೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.ಪ್ರದೀಪ್ ಶೆಟ್ಟರ್ ಆಕ್ರೋಶ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಬಹಳಷ್ಟು ಅಭಿಮಾನಿಗಳು, ಸಮಾಜದಿಂದ ಒತ್ತಡವಿದೆ. ಧಾರವಾಡದಿಂದ‌ ಅವರಿಗೆ ಟಿಕೆಟ್ ಕೊಟ್ಟರೆ ಬಹಳಷ್ಟು ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ಬುಧವಾರ ನಗರದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ನಾವು ಅಖಂಡ‌ ಧಾರವಾಡದಲ್ಲಿ ಬೆಳೆದವರು. ಹೀಗಾಗಿ ಧಾರವಾಡ ಅಥವಾ ಹಾವೇರಿಯಲ್ಲಿ ಟಿಕೆಟ್ ಕೊಟ್ಟರೆ ಒಳ್ಳೆಯದು ಎಂದರು.
ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಷಕ್ಕೆ ಮರಳಿದ ಮೇಲೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಭ್ಯರ್ಥಿ ಯಾರೇ ಆಗಲಿ, ಒಟ್ಟಾಗಿ ಕೆಲಸ ಮಾಡಬೇಕು ಅದು ಆಗುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಇನ್ನು ಇತ್ತೀಚಿನ ದಿನಗಳಲ್ಲಿ ತಮ್ಮ ಹೆಸರನ್ನು ಹಾಗೂ ಭಾವಚಿತ್ರವನ್ನು ಯಾ ಭಾರತೀಯ ಜನತಾ ಪಕ್ಷದ ಕಾರ್ಯಕ್ರಮಗಳ ಬ್ಯಾನರ್ ನಲ್ಲಿ ಹಾಕತಾ ಇಲ್ಲ. ಇಂದು ಸಹ ನಡೆದ ಸಭೆಯಲ್ಲಿ ಹಾಕಿಲ್ಲ ಮುಂದಿನ ಎರಡು ದಿನಗಳಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದರು.


Spread the love

Leave a Reply

error: Content is protected !!