*ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ*
*ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ*
*- ಪ್ರಧಾನಿ ಮೋದಿ 14 ಕೋಟಿ ಶೌಚಗೃಹ ನಿರ್ಮಿಸಿ ಜನ ಚೊಂಬು ಹಿಡಿಯೋದನ್ನ ನಿಲ್ಲಿಸಿದ್ದಾರೆ*
*- ಅಂಬೇಡ್ಕರ್ ಗೆ ಅವಮಾನಿಸಿ ದಲಿತರ ಕೈಗೆ ಚೊಂಬು ಕೊಟ್ರು, 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್ಸಿಗರು*
ಹುಬ್ಬಳ್ಳಿ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗು ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
*ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್:* ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿ ಹಾಯ್ದರು.
ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸಿತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಕುಟುಕಿದರು.
ಚತ್ತಿಸಗಡ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.