ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬರ

Spread the love

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬರ

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಲೋಕಸಭಾ ಅಭ್ಯರ್ಥಿಗಳಾಗಿ ಸಚಿವರ ಪುತ್ರರು, ಪುತ್ರಿಯರು ಸ್ಪರ್ಧಿಸಿದ್ದಾರೆ. ಹಾಗಾಗಿ ಕಾರ್ಯಕರ್ತರ ಬರ ಅಲ್ಲಿ ಎದ್ದು ಕಾಣುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಲೇವಡಿ ಮಾಡಿದರು.

ಇಲ್ಲಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಹು-ಧಾ ಮಹಾನಗರ ಹಾಗೂ ಗ್ರಾಮಾಂತರ ಲೋಕಸಭಾ ಚುನಾವಣೆಯ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪರೋಕ್ಷವಾಗಿ ಅವರು ಹಣ ಹಾಗೂ ತೋಳ್ಳಲ ತೋರಿಸಲು ಹೊರಟಿದ್ದಾರೆ. ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ಯೋಜನೆಗಳು ಜನರಿಗೆ ಲಾಭ ತರುವ ಬದಲು ನಷ್ಟವನ್ನುಂಟು ಮಾಡಿವೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹಿತಕ್ಕಾಗಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೊರಟಿದ್ದಾರೆ. ವ್ಯಕ್ತಿಗಿಂತ ದೇಶ ಮುಖ್ಯ ಎಂಬುದನ್ನು ಸಾಬೀತು ಮಾಡಿದ್ದಾರೆ. ಹಾಗಾಗಿ ಭಾರತವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡುವಂತಾಗಿದೆ ಎಂದರು.

ಧಾರವಾಡ ಲೋಕಸಭಾ ಚುನಾವಣಾ ಸಮಿತಿ ಸಂಚಾಲಕ ಮಾ.

ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಮಟ್ಟದ ಕಾರ್ಯಕಾರಿಣಿಯಲ್ಲಿ ಬಹಳಷ್ಟು ಸೂಚನೆಗಳನ್ನು ಪಡೆದಿದ್ದೇವೆ. ಇದನ್ನು ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ವಿಸ್ತರಿಸಲು ಸೂಚನೆ ಸಿಕ್ಕಿದೆ. ಹಾಗಾಗಿ 37 ವಿಭಾಗ ಮಾಡಿದ್ದು ಕಾರ್ಯಕರ್ತರು ಶ್ರಮವಹಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಸಮಾವೇಶಗಳನ್ನು ಏ. 1ರಿಂದ 5ರವರೆಗೆ ಆಯೋಜಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕರಾದ ಅಶೋಕ ಕಾಟವೆ, ಸೀಮಾ ಮಸೂತಿ, ಮಾಜಿ ಮೇಯರ್‌ಗಳಾದ ಶಿವು ಹಿರೇಮಠ, ಈರೇಶ ಅಂಚಟಗೇರಿ, ಪ್ರಮುಖರಾದ ಬಸವರಾಜ ಕುಂದಗೋಳಮಠ, ನಿಂಗಪ್ಪ ಸುತಗಟ್ಟಿ, ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ಸಂಜಯ ಕಪಟಕರ, ರವಿ ನಾಯಕ, ಮಹೇಂದ್ರ ಕೌತಾಳ, ಶಿವು ಮೆಣಸಿನಕಾಯಿ ಇತರರು ಇದ್ದರು.


Spread the love

Leave a Reply

error: Content is protected !!