Breaking News

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ; ಸಚಿವ ಪ್ರಹ್ಲಾದ ಜೋಶಿ*

Spread the love

*ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ; ಸಚಿವ ಪ್ರಹ್ಲಾದ ಜೋಶಿ*

ಹುಬ್ಬಳ್ಳಿ: ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು ಒಪ್ಪಿಕೊಳ್ಳುವುದಿಲ್ಲ. ಇವರ ಅರವತ್ತು ವರ್ಷದ ಸರ್ಕಾರದ ರೂಪುರೇಷೆಗಳನ್ನು ನೋಡಿದರೇ ನಿಜಕ್ಕೂ ನಮಗೆ ಒಂಥರ ನಗುಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋಟ್ಯಾಂತರ ಹಣವನ್ನು ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಕೊಡದೇ ಏನ ಮಾಡುತ್ತಾರೆ. 2016 ಹಾಗೂ 2019ರಲ್ಲಿ ದೊಡ್ಡ ಮಟ್ಟದ ಕ್ಯಾಶ್ ತೆಗೆದುಕೊಂಡಿದ್ದಾರೆ. ಹೀಗಾಗಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ್ದು, ಕಾನೂನು ಪ್ರಕಾರ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ ಎಂದರು.

ಐಟಿ ನೋಟಿಸ್ ಕೊಟ್ಟು ತನಿಖೆಗೆ ಮುಂದಾಗಿದ್ದರೇ ಇದನ್ನು ಕಾಂಗ್ರೆಸ್ ಪಕ್ಷ ರಾಜಕೀಯ ದುರುದ್ದೇಶ ಎಂದು ಟೀಕೆ ಮಾಡುತ್ತಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಅರವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಏನು ಮಾಡಿದ್ದಾರೆ. ತಮ್ಮ ತಪ್ಪನ್ನು ಒಪ್ಪಿಕೊಳ್ಳದ ಮನಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ ಎಂದು ಅವರು ಲೇವಡಿ ಮಾಡಿದರು.

ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ಕುರಿತು ಮಾಧ್ಯಮದ ಪ್ರಶ್ನೆಗೆ ಯಾವುದಕ್ಕೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಂದೆ ನಡೆದರು.

ಬೈಟ್; ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ


Spread the love

About Karnataka Junction

    Check Also

    ಲಯನ್ಸ್ ಪದಗ್ರಹಣ ಸಮಾರಂಭ ನಾಳೆ

    Spread the loveಲಯನ್ಸ್ ಪದಗ್ರಹಣ ಸಮಾರಂಭ ನಾಳೆ ಹುಬ್ಬಳ್ಳಿ: ಲಯನ್ಸ ಕ್ಲಬ್ ಆಫ್ ಹುಬ್ಬಳ್ಳಿ ಪರಿವಾರದ 2024-25ನೇ ಸಾಲಿನ ಪದಾಧಿಕಾರಿಗಳ …

    Leave a Reply

    error: Content is protected !!