*ಧಾರವಾಡ ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ದಿಢೀರ್ ಭೇಟಿ*

Spread the love

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಪದೇ ಪದೇ ಜಗಳ ಹಾಗೂ ಹೊಡೆದಾಟ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿನ ಭದ್ರತೆ ಬಗ್ಗೆ ಪರಿಶೀಲನೆ ಮಾಡುವ ಸಂಬಂಧ ಪೊಲೀಸ್ ಆಯುಕ್ತೆ ರೇಣುಕಾ ಅವರು ಇಂದು ಸ್ವತಃ ತಾವೇ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾವು ಎಲ್ಲವನ್ನೂ ಪರಿಶೀಲನೆ ನಡೆಸಿದ ನಂತರ ಕಾರಾಗೃಹದ ಸಿಬ್ಬಂದಿ ಜೊತೆಗೂ ಪೊಲೀಸ್ ಆಯುಕ್ತರು ಸಭೆ ನಡೆಸಿದರು. ಕಾರಾಗೃಹದಲ್ಲಿ ಪದೇ ಪದೇ ಹೊಡೆದಾಟ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಬಗ್ಗೆ ಅಲ್ಲಿನ ಸಿಬ್ಬಂದಿಯೊಂದಿಗೂ ಚರ್ಚೆ ನಡೆಸಿದ್ದಾರೆ. ಈಗಾಗಲೇ ಎಲ್ಲ ಕಡೆ ಸಿಸಿ ಕ್ಯಾಮೆರಾ ಇದ್ದು, ಗೌಪ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಬಗ್ಗೆ ಚರ್ಚೆ ನಡೆಸಿದ ಪೊಲೀಸ್ ಆಯುಕ್ತರು, ಜೈಲಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಹೆಚ್ಚಿಸುವ ಬಗ್ಗೆಯೂ ಚರ್ಚೆ ನಡೆಸಿದರು.


Spread the love

Leave a Reply

error: Content is protected !!