ಧಾರವಾಡ : ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ 5ನೇ ಬಾರಿ ಆಯ್ಕೆ ಬಯೆಸಿ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಧಾರವಾಡದಲ್ಲಿ ಇಂದು ಚುನಾವಣಾ ಅಧಿಕಾರಿ ದಿವ್ಯ ಪ್ರಭು ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಇವರಿಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಬಿ. ಆರ್. ಪಾಟೀಲ್, ಸಿ. ಸಿ. ಪಾಟೀಲ್, ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಾಥ್ ನೀಡಿದರು. Vo1 ಇದಕ್ಕೂ ಮುನ್ನ ಧಾರವಾಡದ ಶಿವಾಜಿ ಸರ್ಕಲದಲ್ಲಿರುವ ಶಿವಾಜಿ ಮಹಾರಾಜರ ಪುತ್ತಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹಾಗೂ ಬಿ. ಎಸ್. ಯಡಿಯೂರಪ್ಪ ಅವರು ಮಾಲಾರ್ಪಣೆ ಮಾಡಿದರು. ಅನಂತರ ಡೊಳ್ಳು ಹಾಗೂ ವಾದ್ಯಗಳೊಂದಿಗೆ ಸುಮಾರು 20ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಿವಾಜಿ ವೃತ್ತದಿಂದ ಮೆರವಣಿಗೆ ನಡೆಸಿ ಜೂಬ್ಳಿ ವೃತ್ತದಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಯವರ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ನಾಮಪತ್ರ ಸಲ್ಲಿಸಿದರು.
