Breaking News

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್‌ಗೆ 14 ದಿನ ನ್ಯಾಯಾಂಗ ಬಂಧನ, ಮುಸ್ಲಿಮರ ಪ್ರತಿಭಟನೆ

Spread the love

ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಸ್‌ಗೆ 14 ದಿನ ನ್ಯಾಯಾಂಗ ಬಂಧನ, ಮುಸ್ಲಿಮರ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರೀತಿಸಲು ನಿರಾಕರಿಸಿದ ನೇಹಾಳನ್ನು ಕೆಎಲ್‌ಇ ಬಿವಿಬಿ ಕಾಲೇಜು ಆವರಣದಲ್ಲೇ ಹಾಡಹಗಲೇ ಫಯಾಜ್ 9 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವಿದ್ಯಾರ್ಥ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಫಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣ ನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾಗಿದ್ದಾನೆ.
ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಫಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾಗಿದ್ದಾನೆ.
ಕೊಲೆ ಮಾಡಿದ್ದು ಹೇಗೆ?
ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ನೇಹಾ ಮನೆಗೆ ಹಿಂತಿರುಗಿತ್ತಿದ್ದಾಗ ಕಾಲೇಜು ಕ್ಯಾಂಪಸ್‌ ಗೆ ಫಯಾಜ್‌ ಮಾಸ್ಕ್ ಹಾಕಿಕೊಂಡು ಬಂದು ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಬರೋಬ್ಬರಿ 9 ಬಾರಿ ಇರಿದು ಚಾಕು ಅಲ್ಲೇ ಎಸೆದು ಪರಾರಿಯಾಗಿದ್ದಾನೆ. ತಕ್ಷಣ ಪೊಲೀಸರು ಅಲರ್ಟ್ ಆಗಿದ್ದು, ಕಿಮ್ಸ್‌ ಹಿಂಬದಿಯಲ್ಲಿ ಅವಿತುಕೊಂಡಿದ್ದ ಫಯಾಜ್‌ನನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇನ್ನು ಘಟನೆ ಖಂಡಿಸಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಎಬಿವಿಪಿ, ಹಿಂದೂ ಸಂಘಟನೆಗಳು ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹುಬ್ಬಳ್ಳಿಯ ಮುಖ್ಯರಸ್ತೆ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಇನ್ನು ಹಂತಕನ ಹುಟ್ಟೂರು ವಿವಿಧ ಕಡೆಗಳಲ್ಲಿ ಕೂಡ ಹಿಂದೂ, ಮುಸ್ಲಿಂ ಸಮುದಾಯ ಕೂಡ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದೆ.
ದಿಂಗಾಲೇಶ್ವರ ಸ್ವಾಮೀಜಿ ಭಾವುಕ: ಇನ್ನು ನಿನ್ನೆ ಕೊಲೆಯಾದ ನೇಹಾ ಅಂತಿಮ ದರ್ಶನಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಆಗಮಿಸಿದರು. ಈ ವೇಳೆ ಭಾವುಕರಾದ್ರು. ನೇಹಾ ಕುಟುಂಬಸ್ಥರು ದಿಂಗಾಲೇಶ್ವರ ಸ್ವಾಮೀಜಿ ಭಕ್ತರಾಗಿದ್ದು, ನೇಹಾಳ ತಂದೆ ನಿರಂಜನಗೆ ಸಾಂತ್ವನ ಹೇಳುತ್ತಲೇ ದಿಂಗಾಲೇಶ್ವರ ಸ್ವಾಮೀಜಿ ಭಾವುಕರಾದ್ರು.


Spread the love

About Karnataka Junction

    Check Also

    ಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು

    Spread the loveಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು ಹುಬ್ಬಳ್ಳಿ: ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿರುವ …

    Leave a Reply

    error: Content is protected !!