Breaking News

ನೇಹಾ ಕಗ್ಗೊಲೆ ಹುಬ್ಬಳ್ಳಿ ಬಂದ್ ಹಿನ್ನೆಲೆ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ

Spread the love

ನೇಹಾ ಕಗ್ಗೊಲೆ ಹುಬ್ಬಳ್ಳಿ ಬಂದ್ ಹಿನ್ನೆಲೆ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ.

ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್‌ ನಾಯಕ ನಿರಂಜನ ಅವರ ಪುತ್ರಿ ನೇಹಾ ಹಿರೇಮಠ ಕೊಲೆ ಸಂಬಂಧಿಸಿ ರಾಜ್ಯ ಸರಕಾರ ನೀಡಿರುವ ಹೇಳಿಕೆ ಹಾಗೂ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಜಯಕರ್ನಾಟಕ ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಬೆಳಿಗ್ಗೆಯೇ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು
ನೇಹಾ ಕೊಲೆ‌ ಖಂಡಿಸಿ ಇಂದು ಹುಬ್ಬಳ್ಳಿ ಬಂದ್ ಕೇವಲ ಸಾಂಕೇತಿಕ ಅಷ್ಟೇ ಮುಂದೆ ಉಗ್ರ ಸ್ವರೂಪದ ಹೋರಾಟಕ್ಕೆ ಸನ್ನದ್ಧ ಆಗಿದ್ದು
ಜಯಕರ್ನಾಟಕ,‌ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿದೆ.
ಹುಬ್ಬಳ್ಳಿಯ ಚೆನ್ನಮ್ಮ‌ಸರ್ಕಲ್ ಬಳಿ ಪ್ರತಿಭಟನೆ ಆರಂಭಿಸಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದಿಂದ ಬಿವಿಬಿ ಕಾಲೇಜು ವರೆಗೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ರಾಜ್ಯ ಸರ್ಕಾರಕ್ಕೆ ಚಪ್ಪಲ್ಲಿ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು
ಕಾರ್ಪೋರೆಟರ್ ನಿರಂಜನ ಪುತ್ರಿ ನೇಹಾ ಕೊಲೆ ಕೇಸ್ ಒಂದು ಕೇಸ್ ಅಲ್ಲಾ ಹೀಗೇ ಅನೇಕ ಪ್ರಕರಣಗಳು ನಡೆಯುತ್ತಿವೆನೇಹಾ ಕೊಲೆ ಇದೊಂದು ಲವ್ ಜಿಹಾದ್
ರಾಜ್ಯ ಸರ್ಕಾರ ನೇಹಾ ಕೊಲೆಯಲ್ಲಿ ಹಗುರವಾಗಿ ನಡೆದುಕೊಳ್ಳುತ್ತಿದೆ
ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಸುಧೀರ ಮುಧೋಳ ಹಾಗೂ ಸಂಘ ಸಂಘಟನೆಯ ಮುಖಂಡೆ ಮಧು ಪಟ್ಟಣಶೆಟ್ಟಿ ಒತ್ತಾಯ ಮಾಡಿದರು.
ಹೊಸೂರ ಸರ್ಕಲ್‌ ಬಳಿ ಮಾನವ ಸರಪಳಿ ಮಾಡಿ ಪ್ರತಿಭಟನೆ
ನಗರದ ಬಿವಿಬಿ ಕಾಲೇಜು ಸೇರಿದಂತೆ ವಿವಿಧಡೆ ವಿವಿಧ ಸಂಘಟನೆಗಳು ಪ್ರತಿಭಟನಾ ವೇಳೆ ರಾಜ್ಯ ಸರ್ಕಾರದ ಬೇಜವಾಬ್ದಾರಿಂದಲೇ ಈ ಘಟನೆಗಳು ಆಗಿದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದರು
ರಾಜ್ಯ ಸರಕಾರವು ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳು ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಆಗಿವೆ ಎಂದು ಹೇಳಿದೆ. “ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಹಾಗೂ “ಇದು ಲವ್‌ ಜೆಹಾದ್‌ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ನೀಡಿರುವ ಹೇಳಿಕೆಗೆ ವ್ಯಾಪಕ ಟೀಕೆ ಕಾರಣವಾದವು.
*ಪೊಲೀಸ್ ಅಧಿಕಾರಿ ಜೊತೆಗೆ ಮಾತಿನ ಚಕಮಕಿ*
ಹುಬ್ಬಳ್ಳಿ ಹೊಸೂರು ಕ್ರಾಸ್ ಬಳಿ ಜಯ ಕರ್ನಾಟಕ ಸಂಘಟನೆಗಳು
ಕಾರ್ಯಕರ್ತರು ಮಾನವ ಸರಪಳಿ ಮಾಡಿ ಪ್ರತಿಭಟನೆಗೆ ಮುಂದಾಗುತಿದ್ದಂತೆ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದರು. ಇದಕ್ಕೆ ಆಕ್ರೋ ಗೊಂಡ ಕಾರ್ಯಕರ್ತರು ಪೊಲೀಸ್ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡರು. ನಂತರ ಮಾನವ ಸರಪಳಿ ಮಾಡಿ ಪ್ರತಿಭಟನೆ ಮಾಡಿದರು.


Spread the love

About Karnataka Junction

    Check Also

    ಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು

    Spread the loveಲೈಂಗಿಕ ದೌರ್ಜನ್ಯ, ಕೊಲೆಗೆ ಯತ್ನ, ಸಿಆರ್‌ಪಿಎಫ್‌ ನೌಕರನ ಮೇಲೆ ಮಹಿಳೆಯಿಂದ ದೂರು ಹುಬ್ಬಳ್ಳಿ: ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿರುವ …

    Leave a Reply

    error: Content is protected !!