ಮನ್ ಕೀ ಬಾತ್ ಕಾರ್ಯಕ್ರಮ ಅತ್ಯಂತ ಪ್ರಭಾವ ಬೀರಿದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ; ಹಳೆ ಹುಬ್ಬಳ್ಳಿ ಆನಂದನಗರದ ಕೃಷ್ಣಾ ಕಾಲೋನಿಯ ಉದ್ಯಾನವನದಲ್ಲಿ
ಭಾರೀ ಜನಪ್ರಿಯ ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಅವರ
ಮನ್​ ಕಿ ಬಾತ್ 89 ನೇ ಆವೃತ್ತಿ ಕಾರ್ಯಕ್ರಮವನ್ನು ಕೇಂದ್ರ ಗಣಿ, ಕಲ್ಲಿದ್ದಲು, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ , ಶಾಸಕ ಅರವಿಂದ ಬೆಲ್ಲದ ಹಾಗೂ ಅಪಾರ ಪ್ರಮಾಣದ ಕಾರ್ಯಕರ್ತರು ವೀಕ್ಷಣೆ ಮಾಡಿ ಮಾತನಾಡಿದರು‌.
ಇದೇ ವೇಳೆ ಮಾತನಾಡಿದ ಕೇಂದ್ರ ಗಣಿ, ಕಲ್ಲಿದ್ದಲು, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು
ಮನ್ ಕೀ ಬಾತ್
ದಿನದಿಂದ ದಿನಕ್ಕೆ ಜನಮನ ಸೆಳೆಯುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಯುವಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಬಗ್ಗೆ ಅವರು ಶ್ಲಾಘಿಸುತ್ತಿದ್ದಾರೆ.
ದೇಶದ ಜನರಿಗೆ ಆಡಳಿತದ ಬಗ್ಗೆ ಮಾಹಿತಿ ಕೊಡುವುದು, ವಿವಿಧ ವಿಷಯಗಳ ಬಗ್ಗೆ ಪ್ರಧಾನಿಯು ತಮ್ಮ ದೃಷ್ಟಿಕೋನ ತಿಳಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ,530 ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಆಜಾಸ್ ಯೋಜನೆ ಅಡಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾಕಷ್ಟು ಪ್ರೋತ್ಸಾಹ ನೀಡಿದೆ. ನಾನು ಸಹ ಕೇಂದ್ರದಿಂದ ಬರುವ ಅನುದಾನ ಜೊತೆಗೆ ಅಗತ್ಯ ಸಹಾಯ ಮಾಡಿದೆ‌ ಎಂದರು.
ಆದ್ದರಿಂದ ತಾವು ಒಂದು ಗಂಟೆ ಬಿಡುವು ಮಾಡಿಕೊಂಡು ತಮ್ಮ ಅಕ್ಕಪಕ್ಕದವರನ್ನು ಸಹ ಕರೆದುಕೊಂಡು ಬಂದು ಇಂತಹ ಉಪಯುಕ್ತವಾದ ಕಾರ್ಯಕ್ರಮ ನೋಡಬೇಕು. ಅಭಿಪ್ರಾಯ ಹಂಚಿಕೊಳ್ಳಲು ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು
ಮನ್ ಕಿ ಬಾತ್ ಮೂಲಕ ದೇಶದ ಜನರನ್ನು ತಲುಪುವ ಮಾರ್ಗವನ್ನು ರೂಪಿಸಿದವರು ಪ್ರಧಾನಿ ನರೇಂದ್ರ ಮೋದಿ ಅವರು ಎಂದರು‌. ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಪ್ರದಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮ ಎಲ್ಲ ಕಾರ್ಯಕ್ರಮಗಳಿಂದ ಹೆಚ್ಚು ಜನಪ್ರಿಯವಾಗಿದೆ. ಇದು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ನೋವು ನಲಿವು ಅರಿತುಕೊಂಡು ಪರಿಹಾರ ಒದಗಿಸಲು ಸಹಕಾರಿಯಾಗಿದೆ ಎಂದರು.
ಭಾರತೀಯ ಜನತಾ ಪಕ್ಷದ ವಕ್ತಾರ ರವಿ ನಾಯಕ, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ ಮುಂತಾದವರು ಭಾಗವಹಿಸಿದ್ದರು ‌


Spread the love

Leave a Reply

error: Content is protected !!