Breaking News

ಮಾಜಿ ಸಚಿವ ವಸಂತ ಬಂಗೇರಾ ನಿಧನಕ್ಕೆ ಗಣ್ಯರು ಸಂತಾಪ

Spread the love

ಮಾಜಿ ಸಚಿವ ವಸಂತ ಬಂಗೇರಾ ನಿಧನಕ್ಕೆ ಗಣ್ಯರು ಸಂತಾಪ

ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ (79) ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗ್ಲೋಬಲ್ ಮಿಡಿಯಾ ಹಾಗೂ ಕಮೀನಿಕೇಷನ್ ಸಂಸ್ಥೆ ಮುಖ್ಯಸ್ಥ ದಿನೇಶ ಶೆಟ್ಡಿ, ಸುಳ್ಳಾ ತಾಲೂಕುಮಹಿಳಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ಹಾಗೂ ಅನೇಕರು ಸಂತಾಪ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸಾಕಷ್ಟು ಪ್ರಭಾವ ನಾಯಕರಾಗಿ ಗುರುತಿ ಸಿಕೊಂಡಿದ್ದ ವಸಂತ ಬಂಗೇರಾ ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದರು. 1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದರು.
ಬುಧವಾರ ನಿಧನರಾದ ಬಂಗೇರ ಅವರ ಪಾರ್ಥಿವ ಶರೀರ ಮೇ 9ರಂದು ಮುಂಜಾನೆ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.
ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಬಂಗೇರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲುವು ಸಾಧಿಸಿ ಬಂಗೇರಾ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ನಿಂತು ಗೆಲುವು ಕಂಡರು. 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು.
ಜೆಡಿಎಸ್ ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮೃತರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯಾ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!