ಧಾರವಾಡ: ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ರಾಜ್ಯದಲ್ಲಿ 153 ಲಕ್ಷ ಟನ್ ಆಹಾರ ಉತ್ಪಾದೆಯಾಗಿದೆ. ಪ್ರಸಕ್ತ ವರ್ಷವು ಉತ್ತಮ ಮಳೆಯಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಮಾಡಲಾಗಿದೆ. ಯಾವುದೇ ಮಾರಾಟಗಾರರು ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿದರೆ ಹಾಗೂ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಿ ತಕ್ಷಣ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಆದೇಶಿಸಿದರು.
ಅವರು ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಜಾಗೃತಿ ಕೋಶದ ಕ್ರಮ*: ಕೃಷಿ ಇಲಾಖೆಯ ಜಾಗೃತಿ ಕೋಶದಿಂದ 2020-21ನೇ ಸಾಲಿನಲ್ಲಿ 16.20 ಕೋಟಿ ರೂ. ಮೊತ್ತದ ಹಾಗೂ 2021-22ರಲ್ಲಿ 1.06 ಕೋಟಿ ರೂ. ಮೊತ್ತದ ನಕಲಿ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ವಶಪಡಿಸಿಕೊಂಡು 2020-21ನೇ ಸಾಲಿನಲ್ಲಿ 55 ಹಾಗೂ 2021-22ರಲ್ಲಿ 13 ಪ್ರಕರಣಗಳನ್ನು ದಾಖಲಿಸಲಾಗಿದೆ.
ನಕಲಿ ಜೈವಿಕ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ, ಅಂಗಡಿಗಳ ವಿರುದ್ಧ 2019-20ರಲ್ಲಿ 69 ಮೊಕೊದ್ದಮೆಗಳನ್ನು ಹಾಗೂ 2020-21ರಲ್ಲಿ 7 ಮೊಕೊದ್ದಮೆಗಳನ್ನು ಈಗಾಗಲೇ ಹೂಡಲಾಗಿದೆ. ಕಳೆದ ಸಾಲಿನಲ್ಲಿ ರಾಜ್ಯದಾದ್ಯಂತ 266 ಮಾರಾಟಗಾರರ ಪರವಾನಿಗೆಯನ್ನು ರದ್ದು ಪಡಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈಗಾಗಲೇ 15 ಅಂಗಡಿಗಳ ಲೈಸನ್ಸ್ ರದ್ಧುಪಡಿಸಲಾಗಿದೆ ಎಂದು ಅವರು ತಿಳಿಸಿದ್ದರು.
Check Also
ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …