ನಾಳೆ ಎಸ್ ಬಿಐ ಎಸ್ ಸಿ ಎಸ್ ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎರಡನೇ ವಲಯ ಸಮ್ಮೇಳನ

Spread the love

ಹುಬ್ಬಳ್ಳಿ; ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಶಿಷ್ಟ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎರಡನೇ ವಲಯ ಸಮ್ಮೇಳನವನ್ನು
ನಗರದ ಗೋಕುಲ ರಸ್ತೆಯ ಚಹ್ವಾನ ಗ್ರೀನ್ ಗಾರ್ಡನ್ ದಲ್ಲಿ ಜೂನ್ 11 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಶಿಷ್ಟ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಪತ್ರಿಕಾ ಪ್ರಕಟಣೆ ನೀಡಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕಾರ್ಯಾ ವ್ಯಾಪ್ತಿಯ ಪ್ರಧಾನ ವ್ಯವಸ್ಥಾಪಕರಾದ ಸಂತಾನು ಪೆಂಡಾಸೆ ಉದ್ಘಾಟನೆ ಮಾಡುವರು, ಮುಖ್ಯ ಅತಿಥಿಯಾಗಿ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಆಗಮಿಸಲಿದ್ದು ಅತಿಥಿಗಳಾಗಿ ಹುಬ್ಬಳ್ಳಿ ಎಸ್ ಬಿಐ ನ ಎಓ-7 ರ ಉಪ ಪ್ರಧಾನ ವ್ಯವಸ್ಥಾಪಕರಾದ ರಾಜೇಂದ್ರನ್ ಎಸ್., ಮನೀಸ್ ಬಿ. ಚಂದ್ರ, ವಿಶೇಷ ಆಮಂತ್ರಿತ್ರರಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಡಿ, ಅತಿಥಿ ಉಪನ್ಯಾಸಕರಾಗಿ ಆಹಾರ ಮತ್ತು ನಾಗರಿಕ ಇಲಾಖೆಯ ನಿವೃತ್ತ ಙಂಟಿ ನಿರ್ದೇಶಕರಾದ ಸದಾಶಿವ ಮರ್ಜಿ, ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಜಯರಾಜ್ ಆಗಮಿಸುವರು.
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಶಿಷ್ಟ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉಪ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಅಷ್ಟೇಕರ್,
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಶಿಷ್ಟ ಮತ್ತು ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಅಜಯ್ ತಳವಾರ, ಮಲ್ಲಪ್ಪ ತಳವಾರ, ರವಿಕುಮಾರ್ ಮಿಶಿ, ವಿಶಾಲ ನಾಯಕ, ಗಂಗಾಧರ ಕಲಕನಿ, ಮಧುರಾ ಶಿರ್ಶಿಕರ್ ಸೇರಿದಂತೆ ಮುಂತಾದವರು ಭಾಗವಹಿಸುವರು.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply