ಏರಿಕೆಯಾಗುತ್ತಿರುವ ಕೋವೀಡ್ ಪ್ರಕರಣಗಳು- ಹೊಸ ಮಾರ್ಗಸೂಚಿ ಬಿಡುಗಡೆ

Spread the love

ಬೆಂಗಳೂರು: ರಾಜ್ಯದಲ್ಲಿ ಇಂದು 22,673 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 525 ಮಂದಿಗೆ ಸೋಂಕು ದೃಢಪಟ್ಟಿದೆ. 228 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಯಾರೂ ಕೂಡ ಮೃತಪಟ್ಟಿಲ್ಲ.
ಸದ್ಯ ರಾಜ್ಯದಲ್ಲಿ 3,177 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ. 2.31 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.04 ಇದೆ. ವಿಮಾನ ನಿಲ್ದಾಣದಲ್ಲಿ 9,464 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 494 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 209 ಮಂದಿ ಬಿಡುಗಡೆಯಾಗಿದ್ದು, 3061 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ರಾಜಧಾನಿಯಲ್ಲಿ ಕೋವಿಡ್ ಸಾವಿನ ಸಂಖ್ಯೆ 16,964 ಇದೆ.ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆ/ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭದ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೋವಿಡ್-19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಐಎಲ್ ಐ ಮತ್ತು ಸಾರಿ ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.ಪ್ರಸ್ತುತ, ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply