ಹುಬ್ಬಳ್ಳಿ ನಗರ ಪ್ರದೇಶಗಳ ಅಭಿವೃದ್ಧಿಗೆ ಮೋದಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಸ್ಮಾರ್ಟ ಸಿಟಿ ನರೇಂದ್ರ ಮೋದಿಯವರ ಕನಸಿನ ಯೋಜನೆ. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಆಗಬೇಕು ಇದು ಮೋದಿಯವರ ಕನಸು. ಹುಬ್ಬಳ್ಳಿ ಸ್ಮಾರ್ಟ್ ಸಿಟಿಗೆ ಸಾಕಷ್ಟು ಹಣ ನೀಡಲಾಗಿದೆ. ಇವತ್ತು 31,4 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಮಾರ್ಟ ಸಿಟಿ ಕಾಮಗಾರಿ ಎರಡು ವರ್ಷದ ಹಿಂದೆಯೇ ಮುಗಿಬೇಕಿತ್ತು. ಯಾಕೆ ಮುಗಿಲಿಲ್ಲ ಅಂದರೆ ಅದರ ರೂಪ ರೇಷ ತಯಾರು ಮಾಡಲು ಗೊಂದಲ ಇತ್ತು. ಸ್ಮಾರ್ಟ್ ಸಿಟಿ ವಿಳಂಬಕ್ಕೆ ಸಿದ್ಧರಾಮಯ್ಯ ಸರ್ಕಾರ ಕಾರಣ ಎಂದು ಪರೋಕ್ಷ ಆರೋಪ ಮಾಡಿದರು.
ಪಾಲಿಕೆಗಳು ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕಿದ್ದವು. ಈ ಕಾರಣದಿಂದ ಎರಡು ವರ್ಷ ಹಿಂದೆ ಉಳಿದಿದೆ. ಮುಂದಿನ ಒಂದು ವರ್ಷಗಳಲ್ಲಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಬೇಕು. ಮೂಲಭೂತ ಸೌಕರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಆದೇಶ ಮಾಡುತ್ತೇನೆ. ಎಲ್ಲವೂ ಪೂರ್ಣ ಪ್ರಮಾಣದಲ್ಲಿ ಯೋಜನಾ ಭದ್ದವಾಗಿ ಆಗಬೇಕು ಎಂದು ಅವರು ಹೇಳಿದರು.
ಈ ಯೋಜನೆ ಪದೇ ಪದೇ ಬರಲ್ಲ, ಸರಿಯಾಗಿ ಬಳಸಿಕೊಳ್ಳಬೇಕು. ಗುಣಮಟ್ಟ ಕಾಪಾಡದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯ ಮೇಲೆಯೆ ಸ್ಮಾರ್ಟ್ ಸಿಟಿ ಎಮ್ ಡಿ ಗೆ ಖಡಕ್ ಸೂಚನೆ ನೀಡಿದ ಅವರು, ಶಕೀಲ್ ಅಹ್ಮದ್ ಗೆ ವಾರ್ನ್ ಮಾಡಿ, ಕಾಲ ಮಿತಿಯೊಳಗೆ ಗುಣ್ಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಖಡಕ್ ಆದೇಶ ಮಾಡಿದರು.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …