Breaking News

ಪೊಲೀಸ್ ಸಬ್​ ಇನ್ಸ್​ಪೆಕ್ಟರ್ ಪರೀಕ್ಷೆಯಲ್ಲಿ ಅಕ್ರಮ

Spread the love

ಬೆಂಗಳೂರು: ಪಿಎಸ್​​ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿ, ಅಭ್ಯರ್ಥಿಗಳಿಗೆ ಹೊಸದಾಗಿ ಮರುಪರೀಕ್ಷೆ ಪರೀಕ್ಷೆ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಒಂದಕ್ಕಿಂತ ಹೆಚ್ಚು ಸೆಂಟರ್​​​ನಲ್ಲಿ ಅವ್ಯವಹಾರ ಮನದಟ್ಟಾಗಿದೆ. ಸರ್ಕಾರ ಇಡೀ ಪರೀಕ್ಷೆಯನ್ನ ರದ್ದುಪಡಿಸಿದೆ. 54,289 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಅವರಿಗೆ ಇನ್ನೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದು, ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Karnataka Junction

    Check Also

    ಕೆರೆಯಲ್ಲಿ ಮುಳುಗಿ ಯುವಕ ಸಾವು

    Spread the loveಹುಬ್ಬಳ್ಳಿ; ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಾಳ ಕುಸುಗಲ್ ಗ್ರಾಮದ ಬಳಿ ಕೆರೆಯಲ್ಲಿ ಗ್ರಾಮದ ದಾವಲಸಾಬ ಹೆಬಸೂರ …

    Leave a Reply

    error: Content is protected !!