.ಹುಬ್ಬಳ್ಳಿ: ‘ಇಲ್ಲಿನ ಜಯಚಾಮರಾಜ ನಗರದ ಅಕ್ಕನ ಬಳಗ ಸಭಾಂಗಣದಲ್ಲಿ ಸೆ.12ರಂದು ಗಜಾನನ ಮಹಾಮಂಡಳದ ವತಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ‘ವೀರ ಸಂಗೊಳ್ಳಿ ರಾಯಣ್ಣ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಗಂಗಾಧರ ದೊಡ್ಡವಾಡ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
‘ಕಳೆದ 32 ವರ್ಷಗಳಿಂದ ಗಜಾನನ ಮಹಾಮಂಡಳವು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ಜೊತೆಗೆ ಪ್ರತಿವರ್ಷ 50 ಸಾರ್ವಜನಿಕ ಗಣೇಶ ಮೂರ್ತಿ, ಸಮಿತಿಗಳಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿಯೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.
ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶಮೂರ್ತಿಯ ಬೃಹತ್ ಮಂಟಪಗಳಿಗೆ ತಂಬಾಕು ಉತ್ಪನ್ನ ಮಾರಾಟ, ಸೇವನೆಗೆ ಸಂಬಂಧಿಸಿದ ಯಾವುದೇ ಜಾಹೀರಾತು ಫಲಕ, ಬ್ಯಾನರ್‌ಗಳನ್ನು ಅಳವಡಿಸಬಾರದು’ ಎಂದು ಮನವಿ ಮಾಡಿದರು.ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್,
ಸಿದ್ದರಾಜು, ಅನುಪಮ ಹಂಸಬಾವಿ, ವಸಂತ ಡಂಗನವರ, ಶಶಿಕಲಾ ನಾಯ್ಡು ಇದ್ದರು.
Check Also
ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಜಾಗೃತಿಗಾಗಿ ಕ್ವಾಲಿಟಿ ವಾಕ್
Spread the loveಹುಬ್ಬಳ್ಳಿ: ಇಲ್ಲಿಯ ಬ್ಯೂರೋ ಆಫ್ ಇಂಡಿಯನ್ ಸ್ಟಶ್ಚಯಂಡರ್ಡ್ಸ್ (ಬಿಐಎಸ್) ಶಾಖೆ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಕ್ವಾಲಿಟಿ ವಾಕ್‌ಗೆ …