ಬೆಳಗಾವಿ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ 15: ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಅಮಿತ್ ಶಾ, ಬಿ.ಎಸ್ .ಯಡಿಯೂರಪ್ಪ ನನ್ನ ಜೊತೆ ಮಾತಾಡಿದ್ದಾರೆ ಎಂದು ಹೇಳಿದ್ದು ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ. ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ. ಅಧಿಕೃತವಾಗಿ ಅಭ್ಯರ್ಥಿ ಘೋಷಿಸಿದ ನಂತರ ತಯಾರಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ಸಮಾಧಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮೇಲೆ ಸುಮ್ನೆ ಸುಳ್ಳು ಕೇಸ್ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಸುಳ್ಳು ಕೇಸ್ ದಾಖಲೆ ಮಾಡಿದ್ದಾರೆ. ಅದು ಫಾಲ್ಸ್ ಕೇಸ್. ಯಡಿಯೂರಪ್ಪ ಆ ಕೇಸ್ನಿಂದ ಹೊರಗೆ ಬರುತ್ತಾರೆ ಎಂದು ಹೇಳಿದ್ದಾರೆ.